ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ ಸಿ ಕೇಬಲ್ ತೆರವು ಪ್ರಾರಂಭಿಸಲಾಗಿದೆ.
ಅನಧಿಕೃತ ಓಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಸಲು ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ.
ಹೀಗಾಗಿ ವಲಯ ಆಯುಕ್ತ ಇಬ್ರಾಯಿಮ್ ಮೈಗುರ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅನಧಿಕೃತವಾಗಿ ಅಳವಡಿಸಿರುವ ಓ. ಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಯಲಿದೆ.