ಪರೀಕ್ಷಾ ಕೊಠಡಿ ಪ್ರವೇಶಿಸುವ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿ ಈ ಘಟನೆ ನಡೆದಿದೆ.
ಶಾಂತಬಾ ಗಜೇರ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ರಾಜೋಸರ ಮೃತಪಟ್ಟವಳು. ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುತ್ತಿದ್ದಾಗ ಸಾಕ್ಷಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸಾವಿಗೆ ಹೃದಯಾಘಾತ ಕಾರಣ ಎಂದು ವರದಿಯಾಗಿದೆ.
ಗುಜರಾತಿನಲ್ಲಿ ಹೃದಯ ಸಂಬಂಧಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ರಾಜ್ಯ ಆರೋಗ್ಯ ಸಚಿವ ಋಷಿಕೇಶ್ ಪಟೇಲ್ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ವೈದ್ಯಕೀಯ ತಜ್ಞರೊಂದಿಗೆ ವಿಶೇಷವಾಗಿ ಹೃದ್ರೋಗ ತಜ್ಞರೊಂದಿಗೆ ಸಭೆ ಕರೆದಿದ್ದರು.