ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿ ಹತ್ಯೆ ಕರ್ನಾಟಕ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಮಾ(37) ಸುಬ್ರಮಣ್ಯ ಪೋರಾದ ಅವರ ಮನೆಯಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಳೆದ ಐದು ವರ್ಷಗಳಿಂದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದಲ್ಲಿ ಪ್ರತಿಮಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿ ಅಂದು ರಾತ್ರಿ ಹಾಗೂ ಮರುದಿನ ಬೆಳಗ್ಗೆ ಪ್ರತಿಮಾಗೆ ದೂರವಾಣಿ ಕರೆ ಮಾಡಿದರೂ ಅಣ್ಣ ಸ್ಪಂದಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ.
ಫೋರೆನ್ಸಿಕ್ ಮತ್ತು ತಾಂತ್ರಿಕ ತಂಡಗಳು ಸ್ಥಳದಲ್ಲಿದ್ದು, ಮೂರು ವಿಶೇಷ ತಂಡಗಳನ್ನು ಕೂಲಂಕಷ ತನಿಖೆಗೆ ನಿಯೋಜಿಸಲಾಗಿದೆ ಎಂದು ಬೆಂಗಳೂರು ನಗರದ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ. ಯಾವುದೇ ಆಭರಣ ಅಥವಾ ಬೆಲೆಬಾಳುವ ವಸ್ತುಗಳು ನಷ್ಟವಾಗಿಲ್ಲ. ತನಿಖೆ ಮುಂದುವರೆದಂತೆ ಕೊಲೆಗೆ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.