ಜಾತಿ ಗಣತಿಯ ಗೊಂದಲದ ನಡುವೆ, ನ್ಯಾಯಮೂರ್ತಿ ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಇಂದು ಮಾದಿಗ ಸಮುದಾಯದಿಂದ ಮಹತ್ವದ ಸಭೆ ನಡೆಯಲಿದೆ.
ಕರ್ನಾಟಕ ಆದಿಜಾಂಭವ ಸಾಂಸ್ಕೃತಿಕ ಸಮಿತಿ ಕರೆದಿರುವ ಸಭೆಯಲ್ಲಿ ಸಚಿವರಾದ ಕೆ. ಹೆಚ್. ಮುನಿಯಪ್ಪ, ಆರ್. ಬಿ. ತಿಮ್ಮಾಪೂರ, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕರಾದ ರೂಪಾ ಶಶಿಧರ್, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದೆ.