ಹರಿಯಾಣದಲ್ಲಿ ಪ್ರಾಂಶುಪಾಲರೊಬ್ಬರು ಕ್ರೌರ್ಯ ಮೆರೆದಿದ್ದಾರೆ. ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 50 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆತನ ನಿರಂತರ ವರ್ತನೆ ಸಹಿಸಲಾಗದೆ ಬಾಲಕಿಯರು ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಧಾನಿ ಕಾರ್ಯಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದೆಯಂತೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿದ್ದ ಪ್ರಾಂಶುಪಾಲನನ್ನು ಬಂಧಿಸಿ ತನಿಖೆ ನಡೆಸಲಾಗಿದೆ.
ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಧಾನಿ ಕಾರ್ಯಾಲಯ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.
ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. 50 ಹುಡುಗಿಯರು ಕಿರುಕುಳಕ್ಕೊಳಗಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.