ಬಿಬಿಎಂಪಿ: ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿದ್ದು, ಅದರಲ್ಲಿ ಪೊದೆ ಬೆಳೆಯಲು ಬಿಟ್ಟಲ್ಲಿ ಸಂಬಂಧಪಟ್ಟ ಮಾಲೀಕರಿಗೆ ದಂಡ ವಿಧಿಸಲು ನಿರ್ಧರಿಸಿದೆ.
ಖಾಲಿ ನಿವೇಶನ ಹೊಂದಿರುವ ಮಾಲೀಕರು ಅದರಲ್ಲಿ ತಕ್ಷಣವೇ ಮನೆ ನಿರ್ಮಾಣ ಮಾಡಬೇಕು. ಇಲ್ಲವೇ ಖಾಲಿ ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಬೇಕು.
ಒಂದು ವೇಳೆ ಖಾಲಿ ನಿವೇಶನದಲ್ಲಿ ಕಸ ಹಾಕುವುದು, ಕಟ್ಟಡ ತ್ಯಾಜ್ಯ ಸುರಿಯುವುದು, ಪೊದೆಗಳನ್ನು ಬೆಳೆಸಿದಲ್ಲಿ ಸಂಬಂಧಪಟ್ಟ ಮಾಲೀಕರಿಗೆ ಬಿಬಿಎಂಪಿ ವತಿಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.