ಬೀದರ್ ಜಿಲ್ಲೆಯ ಔರಾದ ಬಿ ಹಾಗೂ ಕಮಲನಗರ ತಾಲೂಕಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ರವರಿಗೆ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಅಭಿನಂದನೆ ತಿಳಿಸಿದ್ದಾರೆ.
ತಾಲೂಕಿನಲ್ಲಿ ಮುಂಗಾರು ಹಂಗಾಮಿಯಲ್ಲಿ ಮಳೆ ಕಮ್ಮಿ ಆಗಿರುವ ಕಾರಣಕ್ಕಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು ಅರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರು ಎರಡು ತಾಲೂಕುಗಳಲ್ಲಿನ ರೈತರ ಸಂಕಷ್ಟ ಸರ್ಕಾರಕ್ಕೆ ಮನವರಿಕೆ ಮಾಡಿ ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ರಾಜ್ಯ ಸರ್ಕಾರಕ್ಕೆ ಸಮಸ್ತ ತಾಲೂಕಿನ ಜನತೆ ಪರ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಸಹ ಸಂಚಾಲಕ ಹಾಗೂ ಔರಾದ ತಾಲೂಕು ಕಾಂಗ್ರೆಸ್ ಮುಖಂಡರಾದ ಸುಧಾಕರ ಕೊಳ್ಳುರ ಅವರು ಅಭಿನಂದನೆ ಸಲ್ಲಿಸಿದರು.
ವರದಿ: ಅರವಿಂದ ಮಲ್ಲಿಗೆ ಬೀದರ್