ಬೆಂಗಳೂರು: ಶೀಘ್ರದಲ್ಲಿ ಕೆಇಎ (KEA) ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ನನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಡಿ ಪಾಟೀಲ್ ಬಂಧನ ಮಾಡಲು ಸೂಚನೆ ನೀಡಲಾಗಿದೆ. ಆತ ಮಹಾರಾಷ್ಟ್ರದಲ್ಲಿ ತಪ್ಪಿಸಿಕೊಂಡು ಹೋಗಿರುವ ಬಗ್ಗೆ ಮಾಹಿತಿ ಇದೆ. ಪೊಲೀಸರು ಅವರನ್ನು ಅರೆಸ್ಟ್ ಮಾಡಿಕೊಂಡು ಬರುತ್ತಾರೆ. ಒಂದು ದಿನ ತಪ್ಪಿಸಿಕೊಂಡು ಹೋಗಬಹುದು. ಯಾರಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದರೆ ಅವರ ಮೇಲೆಯೂ ಕ್ರಮ ಜರುಗಿಸಲಾಗುವುದು ಎಂದರು.