ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ , ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್, ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್, ನಂದಿನಿ ಲೇಔಟ್ ನಲ್ಲಿ 70.60 ಮಿ.ಮೀ., ನಾಗೇನಹಳ್ಳಿ 71 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್ ಮಳೆಯಾಗಿದೆ.
ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 ಮಿಲಿ ಮೀಟರ್, ಕೊಟ್ಟಿಗೆಪಾಳ್ಯ 64 ಮಿ.ಮೀ., ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.