ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ತಲೆಯ ಹಾವುಗಳನ್ನು, ವನ್ಯಮೃಗಗಳ ಕೊಂಬುಗಳನ್ನು ಹಾಗೂ ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.
ವೈಯಾಲಿಕಾವಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎರಡು ತಲೆಯ ಎರಡು ಜೀವಂತ ಹಾವುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾಗೂ ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಮತ್ತು ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಬಂದ ಮಾಹಿತಿ ಮೇರೆಗೆ ಪ್ರತ್ಯೇಕವಾಗಿ ದಾಳಿ ಮಾಡಿ, ವ್ಯಕ್ತಿಗಳನ್ನು ವಶಕ್ಕೆ ಪಡೆದು, ಅವರಿಂದ ಸುಮಾರು 10 ಲಕ್ಷ ರೂ ಬೆಲೆ ಬಾಳುವ ಎರಡು ತಲೆಯ ಎರಡು ಹಾವುಗಳನ್ನು, ಸುಮಾರು 12 ಲಕ್ಷ ರೂ ಬೆಲೆಬಾಳುವ 12 ಜಿಂಕೆ ಕೊಂಬುಗಳನ್ನು ಹಾಗೂ ಸುಮಾರು 5 ಲಕ್ಷ ರೂ ಬೆಲೆಬಾಳುವ ಆನೆಯ ದಂತವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.