ಇತ್ತೀಚೆಗೆ ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ಹೋಲುವಂತೆ ಡೀಪ್ ಫೇಕ್ ವೀಡಿಯೊ ಒಂದು ಸಾಕಷ್ಟು ಹರಿದಾಡುತ್ತಿದೆ.
ಈ ಹಿನ್ನೆಲೆಯಲ್ಲಿ ನಟ ಅಮಿತಾಬ್ ಬಚ್ಚನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಪ್ಪು ಬಟ್ಟೆಯನ್ನು ಧರಿಸಿರುವ ಮಹಿಳೆಯೊಬ್ಬರು ಲಿಫ್ಟ್ಗೆ ಪ್ರವೇಶಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಅಸಲಿಯೇತ್ತೇನೆಂದರೆ ಇದೊಂದು ಫೇಕ್ ವೀಡಿಯೊ ಆಗಿದ್ದು ಹೊರ ದೇಶದಲ್ಲಿರುವ ಭಾರತೀಯ ಮೂಲದ ಇನ್ ಫ್ಲ್ಯುಯೇನ್ಸರ್ ಜಾರಾ ಪಟೇಲ್ ಎನ್ನುವ ಯುವತಿಯದ್ದಾಗಿದೆ.
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಸ್ತುತ ಆಳವಾದ ನಕಲಿಗಳಂತಹ ಸುಳ್ಳು ಮಾಹಿತಿಯು ಅತ್ಯಂತ ಅಪಾಯಕಾರಿ ಮತ್ತು ಹಾನಿಕಾರಕವಾಗುತ್ತಿದೆ ಎಂದು ಸೋಮವಾರ ಟ್ವಿಟ್ ಮಾಡಿದ್ದಾರೆ.
ಇಂತಹ ವೀಡಿಯೋ ಹಾಕುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, ಐಟಿ ಕಾಯ್ದೆಯ ನಿಬಂಧನೆಗಳ ಪ್ರಕಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.