ಕರ್ತವ್ಯಕ್ಕೆ ಬಂದ ಸಬ್ ಇನ್ಸ್ ಪೆಕ್ಟರ್ ಬನಿಯನ್ ಹಾಕಿದ ಪರಿಣಾಮ ವರ್ಗಾವಣೆಯಾಗಿದೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಬನಿಯನ್ ನಲ್ಲಿ ಎದ್ದು ನಿಂತು ಪೊಲೀಸರ ಅಹವಾಲು ಆಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ವಿರುದ್ಧ ಕ್ರಮ ಅನುಸರಿಸಲಾಗುತ್ತದೆ.
ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಧಿಯಾ ಔಟ್ ಪೋಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಸ್ ಐ ರಾಮ್ ನರೇನ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ ಪಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸಲಾಗುವುದು ಮತ್ತು ಪ್ರಕರಣವನ್ನು ಸಿರತ್ತು ಸರ್ಕಲ್ ಅಧಿಕಾರಿ ಅವಧೇಶ್ ವಿಶ್ವಕರ್ಮ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.