ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿ 1.09 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ.
ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಅದರಂತೆ ಅಶೋಕ ಹೋಟೆಲ್ ಗೆ ಕರೆಸಿ ಡೀಲ್ ಮಾಡಿಕೊಂಡಿದ್ದಾರೆ. ಅಲ್ಲದೆ, 1.09 ಕೋಟಿ ರೂ. ಅಡ್ವಾನ್ಸ್ ಪಡೆದಿದ್ದಾರೆ.