ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾನಸಿಕವಾಗಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
2023ರ ಅಕ್ಟೋಬರ್ 5ರಂದು ಅಪ್ರಾಪ್ತ ಬಾಲಕನೊಬ್ಬನ ಪೋಷಕರು ಅವರ ತಾಯಿ, ಅಜ್ಜಿಯ ನಡುವಿನ ಮಕ್ಕಳ ಪಾಲನೆಗೆ ಸಂಬಂಧಿಸಿದ ಉಂಟಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಂಬಂಧಿಸಿದಂತೆ ನಿರ್ದೇಶನ ನೀಡಿದೆ.