ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಡಾ ಮತ್ತು ಕಾಂಗ್ಚುಪ್ ನಡುವಿನ ಹಳ್ಳಿಯಲ್ಲಿ ಗುಂಡು ಹಾರಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಗಾಯಗೊಂಡವರಲ್ಲಿ ಏಳು ಮಂದಿಯನ್ನು ಲ್ಯಾಂಫೆಲ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಮೂವರು ಇಂಫಾಲ್ನ ರಾಜ್ ಮೆಡಿಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.