ಹರಿಯಾಣದ ಗುರುಗ್ರಾಮ್ ನಲ್ಲಿ ದೆಹಲಿ-ಜೈಪುರ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
12 ಮಂದಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಘಟಕಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ವಿಡಿಯೋ ಹರಿದಾಡುತ್ತಿದೆ. ಬಸ್ಸಿನಿಂದ ಜ್ವಾಲೆಗಳು ಬರುತ್ತಿದ್ದವು. ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಎಸಿಪಿ ವರುಣ್ ದಹಿಯಾ ಅವರು ಸ್ಲೀಪರ್ ಬಸ್ ನಿಂದ ಎರಡು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಹಲವಾರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.