ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನ ಕಥೋಹಾಲನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್‍ಫ್ರಂಟ್‍ನೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.
ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.