ದೆಹಲಿಯಲ್ಲಿ ಶಾಲೆಗಳಿಗೆ ಆರಂಭಿಕ ಚಳಿಗಾಲದ ರಜೆ. ನವೆಂಬರ್ 9 ರಿಂದ 19 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲು ದೆಹಲಿ ಸರ್ಕಾರ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನಿರ್ಬಂಧ ಹೇರಿದ್ದರೂ ಗಾಳಿಯ ಗುಣಮಟ್ಟ ಸುಧಾರಣೆಯಾಗದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಇದೇ ತಿಂಗಳ 10ರವರೆಗೆ ರಜೆ ಘೋಷಿಸಲಾಗಿತ್ತು. ಇದು ವಿಸ್ತರಣೆಯಾಗಿದೆ. ಉಳಿದ ಭಾಗದ ಚಳಿಗಾಲದ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಇದೇ ವೇಳೆ ಬೇರೆ ರಾಜ್ಯಗಳಿಂದ ದೆಹಲಿಗೆ ಬರುವ ಆಪ್ ಆಧಾರಿತ ಕ್ಯಾಬ್ ಗಳ ಮೇಲೆ ನಿಷೇಧ ಹೇರಲಾಗಿದೆ. ಅಂದರೆ ನೋಯ್ಡಾ ಅಥವಾ ಗುರುಗ್ರಾಮದಿಂದ ಓಲಾ-ಉಬರ್ ಮೂಲಕ ದೆಹಲಿಗೆ ಬರಲು ಸಾಧ್ಯವಿಲ್ಲ. ಸದ್ಯ ದೆಹಲಿಯಲ್ಲಿ ಸೇವೆ ಮುಂದುವರಿದಿದೆ.