ರಿಪೇರಿ ಮಾಡುವ ವೇಳೆ ವಿಮಾನದಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ರಾಮಪ್ರಕಾಶ್ ಸಿಂಗ್(56) ಏರ್ ಇಂಡಿಯಾದಲ್ಲಿ ಹಿರಿಯ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು.
ಸೋಮವಾರ ರಾತ್ರಿ ವಿಮಾನ ರಿಪೇರಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿಮಾನದಿಂದ ಕೆಳಗೆ ಬಿದ್ದಿದ್ದಾರೆ. ಆತನ ತಲೆಗೆ ತೀವ್ರ ಗಾಯಗಳಾಗಿವೆ.
ಅಲ್ಲಿದ್ದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.