ಉತ್ತರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ರಾಜ್ಯದ ಔರೈಯಾ ಜಿಲ್ಲೆಯ ನವೀನ್ ಬಸ್ತಿ ಪಶ್ಚಿಮ ನಿವಾಸಿ ಪ್ರಬಲ್ ಪ್ರತಾಪ್ ಸಿಂಗ್ ಅವರ ಪುತ್ರಿ ಅಂಜಲಿ(20) ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.
ತಕ್ಷಣವೇ ಆಕೆಯನ್ನು ಸಿಎಚ್ ಸಿಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಆಕೆಯ ಶವವನ್ನು ಮನೆಗೆ ಕೊಂಡೊಯ್ಯಲು ವಾಹನ ಇಲ್ಲದ ಕಾರಣ ಮೃತರ ಅಣ್ಣ ಬೈಕ್ ನಲ್ಲಿ ಶವವನ್ನು ಮನೆಗೆ ಸಾಗಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.