ಬೆಂಗಳೂರು ನಗರದ ವಿವಿಧ ಪೊಲೀಸ್ ವಿಭಾಗಗಳ ವ್ಯಾಪ್ತಿಯ ರೌಡಿಶೀಟರ್ ಗಳ ಮನೆಯ ಮೇಲೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ತಡರಾತ್ರಿ ದಾಳಿ ನಡೆಸಿ ಬಿಸಿ ಮುಟ್ಟಿಸಿದರು.
ರೌಡಿಶೀಟರ್ ಗಳಾದ ರಮೇಶ್, ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.
‘ಮಾರಕಾಸ್ತ್ರಗಳು ಹಾಗೂ ಕೆಲವು ದಾಖಲೆ ಪತ್ರಗಳನ್ನು ಜಪ್ತಿ ಮಾಡಲಾಗಿದೆ. ಕೆಲವು ರೌಡಿಗಳ ಮನೆಯಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.