ಚುನಾವಣಾ ರಾಜಕೀಯದಿಂದ ಡಿ.ವಿ. ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ. ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ.
ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.