ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
ಮದುವೆಗೆಂದು ಬಂದಿದ್ದ ವರನ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಇದಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿ ಶಾಮಕದಳದಿಂದ ಬೆಂಕಿನಂದಿಸಲಾಯಿತು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.