ಕರ್ನಾಟಕದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬರ ಇದ್ದರೂ ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಜಾಹೀರಾತಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41,630 ಹೆಕ್ಟೇರ್ ಭತ್ತ ಒಣಗಿ ಹೋಗಿದೆ.
ಬರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ 192 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಈ ಬಾರಿ ಪರಿಹಾರ ಮೊತ್ತವನ್ನೂ ಕಡಿತಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.