ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 13 ಆರೋಪಿಗಳನ್ನು ನಗರದ ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ಆ್ಯಪ್ ಮೂಲಕ ಪಂದ್ಯಗಳ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 11 ಸ್ಥಳಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಒಳಭಾಗದ ಪ್ರೇಕ್ಷಕರ ಗ್ಯಾಲರಿಯಲ್ಲೂ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.