ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಜಾಲ ವೊಂದನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ಯಶಸ್ವಿಯಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಮಾದಕ ವಸ್ತುಗಳ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಆಫ್ರಿಕನ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಅಲ್ಲದೇ, ಎಂಡಿಎಂಎ ತಯಾರಿಕೆಗೆ ಬಳಸಲಾದ ವಿವಿಧ ಕಚ್ಚಾ ವಸ್ತುಗಳು ಮತ್ತು ರಾಸಾಯನಿಕಗಳ ಜೊತೆಗೆ ಸುಮಾರು 10 ಕೋಟಿ ಮೌಲ್ಯದ 5 ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ ಎಂದರು.