ಬೆಂಗಳೂರು : ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಆ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ಸಂಭವಿಸಿದೆ. ಆದರೆ, ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಬೆಂಗಳೂರು-ಹೊಸೂರುರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಒರಿಸ್ಸಾ ಮೂಲದ ನಿರಂಜನ್ ಸಾವನ್ನಪ್ಪಿದ ವ್ಯಕ್ತಿ.
ಹಳೆ ಚಂದಾಪುರಿಂದ ನಡೆದು ಬರುವಾಗ ನಿರಂಜನ್ಗೆ ಈಚರ್ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.