ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಶಾಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದ್ರೆ, ಇಲ್ಲಿನ ಶಾಲೆಗೆ ಸರಿಯಾದ ನೀರಿನ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಡಿ. ನಯೀಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು ನೀರಿಗಾಗಿ ಪರದಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಔರಾದ ತಾಲ್ಲೂಕಾ ಪಂಚಾಯಿತಿ ಇ. ಓ. ಅಧಿಕಾರಿಗಳು ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.
ನಿರ್ಲಕ್ಷ್ಯವಹಿಸಿರುವ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಇದೇ ವೇಳೆ ಗ್ರಾಮಸ್ಥರು ಒತ್ತಾಯಿಸಿದರು.
ಈ ವೇಳೆ ಮುಖಂಡರಾದ ಜಾಮೀದ ಸರ್ಫುದ್ದೀನ್, ಪಾಷಾಮಿಯಾ. ಮೌಲಾನಾ ಶೌ. ಮಹಮೂದ್ ಸಾಹಿಬ್ ಇದ್ದರು.
ವರದಿ: ಅರವಿಂದ ಮಲ್ಲಿಗೆ