ವಾಹನ ಸವಾರರೇ ಗಮನಿಸಿ… ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.17 ಕೊನೆಯ ದಿನವಾಗಿದೆ. 01 ಏಪ್ರಿಲ್ 2019ರ ನಂತರ ನೋಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ ಒಳಗಾಗಿ ಹೆಚ್ ಎಸ್ ಆರ್ಪಿ (ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.
ಸಾರಿಗೆ ಇಲಾಖೆಯಿಂದ ಗುರುತಿಸಿದ ಮೂಲ ವಾಹನ ಉತ್ಪಾದನಕ ಕಂಪನಿಗಳು ಹಾಗೂ ಅಧಿಕೃತ ವಾಹನ ಡೀಲರ್ ಗಳು ಮಾತ್ರ ಹೆಚ್. ಎಸ್. ಆರ್. ಪಿ ನಂಬರ್ ಪ್ಲೇಟ್ ಅಳವಡಿಸಲು ಮಾನ್ಯತೆ ಹೊಂದಿರುತ್ತಾರೆ.