ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಚಿರತೆ ಸುಮಾರು 15 ಗಂಟೆಗಳ ಕಾಲ ಜನವಸತಿ ಪ್ರದೇಶದಲ್ಲಿ ಬೀಡುಬಿಟ್ಟು ಪರಾರಿಯಾಗಿದೆ.
ಚಿರತೆ ದಾಳಿಯಲ್ಲಿ ರಕ್ಷಣಾ ಕಾರ್ಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಚಿರತೆ ಕುನ್ನೂರು ಬಳಿಯ ಬ್ರೂಕ್ ಲ್ಯಾಂಡ್ ನಲ್ಲಿರುವ ವಸತಿ ಪ್ರದೇಶದಲ್ಲಿ ಸ್ವಚ್ಛಂದವಾಗಿ ತಿರುಗಾಡಿಕೊಂಡು ಭಾನುವಾರ ಬೆಳಗ್ಗೆ ಮನೆಯೊಂದಕ್ಕೆ ಪ್ರವೇಶಿಸಿದೆ ಎಂದು ವರದಿಯಾಗಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ನಿನ್ನೆ ಬೆಳಗ್ಗೆ ನೀಲಗಿರಿಯ ಕುನ್ನೂರಿನ ಬ್ರೂಕ್ ಲ್ಯಾಂಡ್ಸ್ ಪ್ರದೇಶದ ಮನೆಯೊಂದಕ್ಕೆ ಚಿರತೆಯೊಂದು ನುಗ್ಗಿ 6 ಜನರ ಮೇಲೆ ದಾಳಿ ಮಾಡಿದೆ.