ಉಡುಪಿ ಜಿಲ್ಲೆಯ ಕೆಮ್ಮಣ್ಣು ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದ ದಾರುಣ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮುಸುಕುಧಾರಿ ವ್ಯಕ್ತಿಯೊಬ್ಬ ಬಲವಂತವಾಗಿ ಮನೆಗೆ ನುಗ್ಗಿ ಹಸೀನಾ (46) ಮತ್ತು ಆಕೆಯ 23, 21 ಮತ್ತು 12 ವರ್ಷದ ಮೂವರು ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯಲ್ಲಿ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂತ್ರಸ್ತೆಯ ಪತಿ ಗಲ್ಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.