ದೆಹಲಿ: ವಾಯುವ್ಯ ದೆಹಲಿಯ ಖೇರಾ ಖುರ್ದ್ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಪೂಜೆಗೆಂದು ತೆರಳಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಹಿಂದೆ ಆಸ್ತಿ ವಿವಾದ ಇರಬಹುದೆಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
ಮಹಿಳೆಯ ಕುಟುಂಬದೊಂದಿಗೆ ಕೆಲವು ಆಸ್ತಿ ವಿವಾದವಿದ್ದು, ಇದೇ ದಾಳಿಯ ಹಿಂದೆ ಇದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಘಟನೆ ನಡೆದ ಸ್ಥಳದ ಸಮೀಪದ ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಿತಿ ಗಂಭೀರವಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.