ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಒಂಬತ್ತು ಮಂದಿ ಗಾಯಗೊಂಡಿದ್ದು, ಏಳು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮಥುರಾ ಜಿಲ್ಲೆಯ ಗೋಪಾಲಬಾಗ್ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ.
ಪಟಾಕಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ತ್ವರಿತವಾಗಿ ಇತರ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತೀರ್ಮಾನಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುಟ್ಟ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಎಲ್ಲ ಅಂಗಡಿಗಳಿಗೂ ಪರವಾನಗಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಜಯ್ ಕಿಶೋರ್ ಹೇಳಿದ್ದಾರೆ.