ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ರಚನೆಯ ಒಂದು ಭಾಗ ಶನಿವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಹಲವಾರು ಕಾರ್ಮಿಕರು ಅದರಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್), ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ ಡಿಆರ್ ಎಫ್) ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಪ್ರಕಾರ, ಸುಮಾರು 36 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ ಮತ್ತು ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ೆಂದು ತಿಳಿಸಿದ್ದಾರೆ.
“ಪೊಲೀಸ್ ಪಡೆ, ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ತಂಡಗಳು ಸ್ಥಳಕ್ಕೆ ತಲುಪಿವೆ. ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದೆ. ಅವರೆಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸುತ್ತೇವೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ” ಎಂದು ಎಸ್ಪಿ ಯದುವಂಶಿ ತಿಳಿಸಿದ್ದಾರೆ.