ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಗೊಂಡಿದ್ದಾರೆ. ಸೆಹ್ವಾಗ್ ಜೊತೆಗೆ ಭಾರತದ ಮಾಜಿ ಮಹಿಳಾ ಕ್ರಿಕೆಟಿಗ ಡಯಾನಾ ಎಡುಲ್ಲಿ ಮತ್ತು ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗ ಅರವಿಂದ ಡಿಸಿಲ್ವಾ ಅವರನ್ನು ಹಾಲ್ ಆಫ್ ಫೇಮ್ಗೆ ಸೇರಿಸಿಕೊಳ್ಳಲಾಗಿದೆ ಎಂದು ಐಸಿಸಿ ಸೋಮವಾರ ಪ್ರಕಟಿಸಿದೆ.
ಸೆಹ್ವಾಗ್ 104 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರ ವೃತ್ತಿಜೀವನದಲ್ಲಿ 8,586 ರನ್, 251 ODIಗಳಲ್ಲಿ 8,273 ರನ್ ಮತ್ತು 19 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 394 ರನ್ ಗಳಿಸಿದ್ದಾರೆ. ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಗೊಂಡಿರುವುದಕ್ಕೆ ಸೆಹ್ವಾಗ್ ಸಂತಸ ವ್ಯಕ್ತಪಡಿಸಿದ್ದಾರೆ