ನಾನು ಕಳೆದ 35 ವರ್ಷಗಳ ಹಿಂದೆ ಪಕ್ಷದ ಬಾವುಟ ಕಟ್ಟಿದವನು. ನನಗೆ ಬೇಸರ ಆಗಿರುವುದು ನಿಜ. ಆದ್ರೆ, ಅದಕ್ಕೆಂದು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಸಚಿವ ಸಿ. ಟಿ. ರವಿ ಹೇಳಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಳೆದ 35 ವರ್ಷಗಳ ಹಿಂದೆ ನಾನು ಪಕ್ಷದ ಬಾವುಟ ಕಟ್ಟಿದವನು. ನಂಬಿಕೆ ಕುಸಿದ ದಿನ ಪಕ್ಷ ಬಿಟ್ಟು ಹೊರಗೆ ನಡೆಯುತ್ತೇವೆ ಎಂದಿದ್ದಾರೆ.
ಜೊತೆಗೆ ಒಂದು ಹೆಜ್ಜೆ ಮುಂದೆ ಹೋಗಿ ಯಾರೂ ಇಲ್ಲದ ಸಮಯದಲ್ಲಿ ಪಕ್ಷ ಕಟ್ಟಿದವರು ನಾವು ಎಂದು ಸಿ. ಟಿ. ರವಿ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆ ಆಗಿದೆ, ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ ಎಂದರು.