ನಾಗಾಲ್ಯಾಂಡ್ ನ ದಿಮಾಪುರ ಜಿಲ್ಲೆಯ ನಹರಬಾರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ.
ರಾತ್ರಿ ಸುಮಾರು 10:45ಕ್ಕೆ ನಾಗಾಯೇತರ ಸಮುದಾಯದ ಜನರು ವಾಸವಾಗಿರುವ ಹುಲ್ಲಿನ ಗುಡಿಸಲುಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ದೀಪಾವಳಿ ಸಂಭ್ರಮದಲ್ಲಿ ಪಟಾಕಿಗಳನ್ನು ಸಿಡಿಸಿದ್ದರಿಂದ ಬೆಂಕಿಯು ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ತಿಳಿಸಿದರು. ಆದಾಗ್ಯೂ ತನಿಖೆಯ ಬಳಿಕವೇ ಬೆಂಕಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದರು.