ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಇಬ್ಬರು ಉಗ್ರರು ಹತರಾಗಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಕಳಪೆ ಗೋಚರತೆ ಮತ್ತು ಕೆಟ್ಟ ಹವಾಮಾನದ ಲಾಭವನ್ನು ಭಯೋತ್ಪಾದಕರು ಒಳನುಸುಳಲು ಬಳಸಿಕೊಂಡರು ಎಂದು ಭಾರತೀಯ ಸೇನೆ ಹೇಳಿದೆ. ಅಕ್ಟೋಬರ್ ನಲ್ಲಿಯೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ಉರಿ ಸೆಕ್ಟರ್ ನಲ್ಲಿ ಎಲ್ ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದವು.
ಇಬ್ಬರು ಭಯೋತ್ಪಾದಕರನ್ನು ಕೊಂದ ನಂತರ, ಸೇನೆಯು ಅವರಿಂದ ಎರಡು ಎಕೆ ಸರಣಿ ರೈಫಲ್ಗಳು, 6 ಪಿಸ್ತೂಲ್ ಗಳು ಮತ್ತು 4 ಚೈನೀಸ್ ಹ್ಯಾಂಡ್ ಗ್ರೆನೇಡ್ ಗಳನ್ನು ವಶಪಡಿಸಿಕೊಂಡಿದೆ.