ಮೊದಲ ಪೋಕ್ಸೋ ಕೇಸಲ್ಲಿ ಮುರುಘಾಶ್ರೀ ಜೈಲಿನಿಂದ ಬಿಡುಗಡೆಯಾದರು ಸಹ ಅವರ ವಿರುದ್ಧ ದೂರುಗಳು ಮಾತ್ರ ಇನ್ನೂ ನಿಂತಿಲ್ಲ. ಮುರುಘಾಶ್ರೀ ವಿರುದ್ಧ ಚಿತ್ರದುರ್ಗದ ಎಸ್ ಪಿ ಕಚೇರಿಗೆ ವಕೀಲರಾದ ಮಧುಕುಮಾರ್ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಜಾಮೀನಿನ ಮೇಲೆ ಬಿಡುಗಡೆಯಾದ ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು ಮಧುಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗೆ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಹೈಕೋರ್ಟಿಗೆ ಮನವಿ ಮಾಡಿದ್ದಾರೆ.