ರಾಜಸ್ಥಾನದಲ್ಲಿ ಕಾರು ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವ ಮುನ್ನ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ.
ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ಅಪಘಾತ ಸಂಭವಿಸಿದೆ. ಪೊಲೀಸ್ ತಂಡವು ಪ್ರಧಾನಿ ಭೇಟಿಗೆ ಮುನ್ನ ಕರ್ತವ್ಯಕ್ಕಾಗಿ ನಾಗೌರ್ನಿಂದ ಜುಂಜುನುಗೆ ತೆರಳುತ್ತಿತ್ತು. ಅಷ್ಟರಲ್ಲಿ ಪೊಲೀಸ್ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ.
ಪೊಲೀಸ್ ವಾಹನವನ್ನು ಓವರ್ ಟೇಕ್ ಮಾಡಿದ ನಂತರ ವೇಗವಾಗಿ ಬಂದ ಟ್ರಕ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದೆ ಎಂದು ವರದಿಯಾಗಿದೆ. ಟ್ರಕ್ ಗೆ ವಾಹನ ಡಿಕ್ಕಿ ಹೊಡೆದು ಐವರು ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.