ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರ ಕ್ಕೆ ಬಿ.ಎಸ್.ನಾಗರಾಜ್ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ ಅದರಂತೆ ಸ್ಥಳೀಯ ಮುಖಂಡರ ಜೊತೆ ಗೂಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ 2023 ಯಾವುದೇ ಪಕ್ಷದ ಅಂಗಿಲ್ಲದೆ ಸ್ವಾತಂತ್ರ್ಯವಾಗಿ ಪಕ್ಷ ಅಧಿಕಾರಕ್ಕೆ ತರಲು ರಾಜ್ಯದ ಎಲ್ಲಾ ಭಾಗದಲ್ಲಿ ಸಂಘಟನೆ ಮಾಡಲು ಬದ್ದರಾಗಿದ್ದೇವೆ ಎಂದರು.
ನೀರಾವರಿ ಯೋಜನೆ ಅನುಷ್ಠಾನ ದ ಸಲುವಾಗಿ 180 ಕ್ಷೇತ್ರ ಗಳಲ್ಲಿ ಪಂಚರತ್ನ ಮತ್ತು ಜನತಾ ಜನಧಾರೆ ಯೋಜನೆಗಳನ್ನು ಜನತೆಗೆ ಪರಿಚಯಿಸುವ ಮೂಲಕ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲಾಗುವುದು ಎಂದರು.
ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಫಘಾತ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬಲು ತೆರಳಿದ್ದೇನೆ ಎಂದರು.
ಇದೇ ವೇಳೆಯಲ್ಲಿ ಜೆಡಿಎಸ್ ಪಕ್ಷದ ಮಾಜಿ ಶಾಸಕ ನಿಂಗಪ್ಪ. ಎಂ.ಟಿ.ಕೃಷ್ಣ ಪ್ಪ ಗುಬ್ಬಿ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್. ಇತರರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB