ಸರಗೂರು: 2028ರ ಎಚ್.ಡಿ.ಕೋಟೆ ವಿಧಾನಸಭಾ ಮೀಸಲು ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿ ಸ್ಪರ್ಧೆ ಮಾಡುತ್ತಿದ್ದಾನೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಹಿನಕಲ್ ಕೆಂಪನಾಯಕ ತಿಳಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಈಗಾಗಲೇ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಎಲ್ಲಾ ಸಮುದಾಯದ ಮುಖಂಡರ ಮಾತುಕತೆ ನಡೆಸಿದ್ದಾನೆ.
ಕಳೆದ ತಿಂಗಳು ತಾಲೂಕಿನ ಬಡಗಲಪುರ, ಬೆಣ್ಣೆಗೆರೆ, ಕೂಡಗಿ, ಹಳೆಹೇಗ್ಗುಡಿಲು ಗ್ರಾಮಗಳಲ್ಲಿ ಹುಲಿ ಬಾಯಿಗೆ ತುತ್ತುಯಾಗಿರುವ ಮೃತಪಟ್ಟ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ನನ್ನ ಕೈಲಾದ ಸಹಾಯ ಮಾಡಿ ಬಂದಿದ್ದಾನೆ ಎಂದು ತಿಳಿಸಿದರು.
ಪಕ್ಷದ ವರಿಷ್ಠರ ಜೊತೆ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಮಾತುಕತೆ ನಡೆಸಲಾಗಿದೆ. ಅವರು ಕ್ಷೇತ್ರದಲ್ಲಿ ಹೋಗಿ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಸಂಘಟನೆ ಮಾಡಿ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಹಿಳೆಯರು ಮತ್ತು ಮುಖಂಡರು ನಿಮಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಅದರಂತೆ ನಿಮ್ಮ ಪ್ರೀತಿ ಪ್ರೋತ್ಸಾಹ ನನಗೆ ಸಹಕಾರ ನೀಡಬೇಕು ಎಂದು ಪತ್ರಿಕೆ ಪ್ರಕಟಣೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


