nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    ತಿಪಟೂರು July 1, 2026

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    By adminJuly 1, 2026No Comments2 Mins Read
    tipaturu.jpg

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ, ತಾಲ್ಲೂಕಿನ ಮಣಕಿಕೆರೆ ಗ್ರಾಮದ ಶ್ರೀ ಕರಿಯಮ್ಮದೇವಿ ಕಲ್ಯಾಣ ಮಂಟಪದ ಆವರಣದಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.

    ತಾಲ್ಲೂಕಿನ ಕುಮಾರ್ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಶ್ರೀಧರ್ ಅವರ ನೇತೃತ್ವದಲ್ಲಿ ಈ ಶಿಬಿರವು ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಶ್ರೀಧರ್ ಅವರು, “ಸಪ್ತ ವ್ಯಸನಗಳಲ್ಲಿ ಅತ್ಯಂತ ಅಪಾಯಕಾರಿಯಾದ ಮದ್ಯವ್ಯಸನವು ಕೇವಲ ವ್ಯಸನಿಯ ಆರೋಗ್ಯವನ್ನು ಮಾತ್ರವಲ್ಲದೆ, ಇಡೀ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ. ಈ ಗಂಭೀರ ಪರಿಸ್ಥಿತಿಯನ್ನು ಅರಿತ ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮದ್ಯದಂಗಡಿಗಳನ್ನು ಮುಚ್ಚಿಸುವ ಬದಲು ಮದ್ಯಪಾನಿಗಳಲ್ಲಿ ಅಂತರಾಳದ ಶುದ್ಧೀಕರಣ ಉಂಟುಮಾಡಿದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ಮನಗಂಡರು. ಭಗವಾನ್ ಮಂಜುನಾಥ ಸ್ವಾಮಿಯ ಕೃಪೆಯಿಂದ 1992ರಲ್ಲಿ ಬೆಳ್ತಂಗಡಿಯಲ್ಲಿ ಆರಂಭವಾದ ಈ ಮದ್ಯವರ್ಜನ ಶಿಬಿರ ಇಂದು ರಾಜ್ಯಾದ್ಯಂತ ದೊಡ್ಡ ಆಂದೋಲನವಾಗಿ ಬೆಳೆದಿದೆ. ಇದುವರೆಗೆ 2077 ಶಿಬಿರಗಳು ಯಶಸ್ವಿಯಾಗಿ ನಡೆದು, ಸುಮಾರು 1.60 ಲಕ್ಷ ಕುಟುಂಬಗಳಲ್ಲಿ ಹೊಸ ಬೆಳಕು ಮೂಡಿಸಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.

    ಮುಂದುವರಿದು ಮಾತನಾಡಿದ ಅವರು, ಈ ಪುಣ್ಯದ ಕಾರ್ಯದಲ್ಲಿ ಪರಮಪೂಜ್ಯರ ಚಿಂತನೆ ಎಷ್ಟು ವಿಸ್ತಾರವಾಗಿದೆಯೋ, ಕಾರ್ಯಕರ್ತರ ಪರಿಶ್ರಮವೂ ಅಷ್ಟೇ ದೊಡ್ಡದಾಗಿದೆ. 2078ನೇ ಶಿಬಿರದ ಮೂಲಕ ವ್ಯಸನಿಗಳ ಸೇವೆ ಮಾಡುವ ಯೋಗಭಾಗ್ಯ ಸಾರ್ಥವಳ್ಳಿ ವಲಯಕ್ಕೆ ದೊರೆತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ವ್ಯಸನಮುಕ್ತರಾಗಬೇಕು ಎಂದು ಕರೆ ನೀಡಿದರು.

    ತುಮಕೂರು-1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯದ ಬಡತನ ನಿರ್ಮೂಲನೆ ಹಾಗೂ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಸವಿಸ್ತಾರವಾಗಿ ವಿವರಿಸಿ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯನಾಯ್ಕ್ ಅವರು ಶಿಬಿರದ 8 ದಿನಗಳ ದಿನಚರಿ ಹಾಗೂ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಯಾನಂದ್ ಟಿ.ಎಸ್. ಅವರು ಮಾತನಾಡಿ, “ಆಡು ಮುಟ್ಟದ ಸೊಪ್ಪಿಲ್ಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡದ ಸಾಮಾಜಿಕ ಕಾರ್ಯಗಳಿಲ್ಲ ಎನ್ನುವಂತೆ ಸಂಸ್ಥೆಯು ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ವಿಶೇಷವಾಗಿ ಮದ್ಯವರ್ಜನ ಶಿಬಿರದಂತಹ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅತ್ಯಂತ ಶ್ಲಾಘನೀಯ,” ಎಂದರು.

    ಶಿಬಿರದ ಅಧ್ಯಕ್ಷತೆಯನ್ನು ರವಿಕುಮಾರ್ ಎಂ.ಡಿ. ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ., ಶಿಬಿರಾಧಿಕಾರಿ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ತರಕಾರಿ ಗಂಗಾಧರ್, ಮಲ್ಲಿಗಪ್ಪಾಚಾರ್, ರೇಖಾ, ಮಹದೇವಮ್ಮ, ಶಂಕರಯ್ಯ, ಶ್ರೀಧರ್, ಅನಿಲ್ ಕುಮಾರ್, ಪತ್ರಕರ್ತರ ಸಂಘದ ಉಪಾಧ್ಯಕ್ಷ ಪ್ರಶಾಂತ್, ಆರೋಗ್ಯ ಸಹಾಯಕಿ ತುಷಾರ, ಧರ್ಮಸ್ಥಳ ಯೋಜನೆಯ ತಾಲ್ಲೂಕಿನ ಸರ್ವ ಸಿಬ್ಬಂದಿ ವರ್ಗದವರು, ನವಜೀವನ ಸಮಿತಿ ಸದಸ್ಯರು, ಪ್ರಗತಿಬಂಧು ಸ್ವಸಹಾಯ ಸಂಘದ ಪಾಲುದಾರರು ಹಾಗೂ ಮಣಕಿನಕೆರೆ ಗ್ರಾಮಸ್ಥರು ಉಪಸ್ಥಿತರಿದ್ದು, ಶಿಬಿರದಲ್ಲಿ ಭಾಗವಹಿಸಿರುವ 60 ಶಿಬಿರಾರ್ಥಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ

    July 5, 2026

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ…

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.