nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ
    ಕೊರಟಗೆರೆ October 16, 2025

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    By adminOctober 16, 2025No Comments2 Mins Read
    ಕೊರಟಗೆರೆ ತಾಲೂಕಿನ ಹನುಮಂತಯ್ಯ ಪಾಳ್ಯದ ದೊಡ್ಡಮ್ಮದೇವಿಯ ಮಂಡಲ ಪೂಜೆಯಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು.

    ಕೊರಟಗೆರೆ: ಗ್ರಾಮ ದೇವತೆಗಳು ಊರಿನ ಎಲ್ಲಾ ಜಾತಿ ಜನರನ್ನು ಒಗ್ಗೂಡಿಸಿ ಧಾರ್ಮಿಕ ಆಚರಣೆಯನ್ನು ಆಚರಿಸುವ ಮೂಲಕ ಸೌಹಾರ್ದತೆಯನ್ನು ಮೂಡಿಸುವುದರೊಂದಿಗೆ ದೇವಿಯು ಊರಿನ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ನೆಮ್ಮದಿಯಾಗಿ ಬಾಳುತ್ತಾರೆ ಎಂದು ಎಲೆರಾಂಪುರದ ನರಸಿಂಹಗಿರಿ ಶ್ರೀ ಕ್ಷೇತ್ರದ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಅವರು ತಾಲೂಕಿನ ಕೋಳಾಲ ಹೋಬಳಿಯ ಹನುಮಂತಯ್ಯನ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ದೊಡ್ಡಮ್ಮ ದೇವಿಯ 48 ನೇ ದಿನದ ಮಂಡಲ ಪೂಜೆ ಧಾರ್ಮಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಗ್ರಾಮ ದೇವತೆಗಳ ಪ್ರತಿಷ್ಠಾಪನೆಗಳು ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ, ಗ್ರಾಮ ದೇವತೆಯು ನಮ್ಮ ಗ್ರಾಮವನ್ನು ದುಷ್ಠಶಕ್ತಿಗಳಿಂದ ಮತ್ತು ರೋಗರುಜಿನಗಳಿಂದ ರಕ್ಷಿಸುತ್ತಾಳೆ ಎನ್ನುವ ನಂಬಿಕೆಯಲ್ಲಿ ಗ್ರಾಮದ ಪ್ರತಿಯೊಬ್ಬ ಜಾತಿ ಧರ್ಮದ ಕುಟುಂಬವು ತನ್ನ ಕೈಲಾದ ಸೇವೆಯನ್ನು ಗ್ರಾಮಸ್ಥರೊಂದಿಗೆ ಒಟ್ಟಾಗಿ ಆಚರಿಸುತ್ತಾರೆ ಎಂದರು.


    Provided by
    Provided by

    ಹನುಮಂತಯ್ಯಪಾಳ್ಯದಂತಹ ಸಣ್ಣ ಗ್ರಾಮದಲ್ಲಿ ಬೃಹತ್ ದೊಡ್ಡಮ್ಮ ದೇವಿಯ ದೇವಾಲಯವು ನಿರ್ಮಾಣವಾಗಿರುವುದು ಈ ಊರಿನ ಜನರ ಸೇವಾ ಮನೋಭಾವ ಮತ್ತು ಭಕ್ತಿಯನ್ನು ತೋರಿಸುತ್ತದೆ, ಇದಕ್ಕೆ ನೀಲೇಶ್ ರವರ ಶ್ರಮವು ಸಾಕಷ್ಟು ಇದೆ ಈ ದೇವಾಲಯದ ಉದ್ಘಾಟನೆಗೆ ಮತ್ತು 48 ದಿನಗಳ ಮಂಡಲ ಪೂಜೆಗೆ ಸುಮಾರು 30ಕ್ಕೂ ಹೆಚ್ಚು ಸ್ವಾಮೀಜಿಗಳೊಂದಿಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಶಾಸಕರುಗಳಾದ ಜೋತಿಗಣೇಶ್, ಸುರೇಶ್ ಗೌಡ, ಸಿಮೇಟ್ ಮಂಜುನಾಥ್, ಚಂದ್ರಪ್ಪ ಸೇರಿದಂತೆ ಹಲವರು ಆಗಮಿಸಿ ದೇವತಾಕಾರ್ಯದಲ್ಲಿ ಪಾಲ್ಗೊಂಡಿರುವುದು ಸಂತೋಷ ತಂದಿದೆ ಎಂದರು.

    ಉದ್ಯಮಿ ನೀಲೇಶ್ ಮಾತನಾಡಿ, ಪೂಜ್ಯ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಹಾಗೂ ಸಮಸ್ತ ಗ್ರಾಮಸ್ಥರ ಸಹಕಾರದೊಂದಿಗೆ ದೇವತಾ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳಿಂದ ಅದ್ದೂರಿಯಾಗಿ ನಡೆದಿದೆ, ಈ ದಿನದೊಂದು ಸುತ್ತ ಮುತ್ತಲ ಗ್ರಾಮಗಳ 21 ಗ್ರಾಮದೇವರುಗಳ ಮೆರವಣಿಗೆಯು ಉತ್ಸವದ ಮೂಲಕ ನಮ್ಮ ಗ್ರಾಮವಾದ ಹನುಮಂತಯ್ಯನ ಪಾಳ್ಯಕ್ಕೆ ಬಂದು ಆಶೀರ್ವಾದಿಸಿವೆ, ಇದಕ್ಕಾಗಿ ನಮ್ಮ ಸುತ್ತಮುತ್ತಲ ಗ್ರಾಮಸ್ಥರಿಗೆ, ದೇವಾಲಯಕ್ಕೆ ಬಂದು ಶುಭ ಕೋರಿದ ಸ್ವಾಮೀಜಿಗಳಿಗೆ, ಜನಪ್ರತಿನಿಧಿಗಳಿಗೆ ಮುಖ್ಯವಾಗಿ ಎಲ್ಲಾ ಕಾರ್ಯಕ್ರಮದ ಮಾರ್ಗದರ್ಶಕರಾದ ಡಾ.ಶ್ರೀ ಹನುಮಂತನಾಥಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದರು.

    ಈ ಕಾರ್ಯಕ್ರಮದಲ್ಲಿ ಶ್ರೀ ತ್ರಿನೇತ್ರಮಹಾಂತ ಶಿವಯೋಗಿ ಸ್ವಾಮೀಜಿ, ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗೌರಿಶಂಕರ ಸ್ವಾಮೀಜಿ, ಶ್ರೀ ಸಿದ್ದರಾಮ ಚೈತನ್ಯ ಸ್ವಾಮೀಜಿ, ಶ್ರೀ ಬಸವ ರಾಜೇಂದ್ರ ಸ್ವಾಮೀಜಿ, ಶ್ರೀ ಕಾರದವೀರ ಬಸವಲಿಂಗ ಸ್ವಾಮೀಜಿ, ಮುಖಂಡರುಗಳಾದ ಮುರಳೀಧರ ಹಾಲಪ್ಪ, ರುದ್ರೇಶ್, ಆರ್.ಎಸ್.ರಾಜಣ್ಣ, ಎಸ್.ಆರ್. ರಾಜಣ್ಣ, ವೇಣುಗೋಪಾಲ್, ಹರೀಶ್ ಸೇರಿದಂತೆ ೨೧ ಗ್ರಾಮಗಳ ಪ್ರಮುಖರು ಸೇರಿದಂತೆ ಹಲವರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ : ದೇಶದ ಶೇ.60 ಭಾಗ ಉದ್ಯೋಗ ಸೃಷ್ಠಿ ಮಾಡಿ 140 ಕೋಟಿ ಜನಸಂಖ್ಯೆಗೆ ಅನ್ನ ನೀಡುವ ಕೃಷಿ ಕ್ಷೇತ್ರ.…

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.