ಬೆಂಗಳೂರು: ಸೆಂಟ್ರಲ್ ಬೋರ್ಟ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE)ನಲ್ಲಿ 212 ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ.
ಆಫೀಸ್ ಸೂಪರಿಂಟೆಂಡೆಂಟ್- 142 ಹುದ್ದೆಗಳು ಹಾಗೂ ಜೂನಿಯರ್ ಅಸಿಸ್ಟಂಟ್ — 70 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಅರ್ಹತೆ:
ಆಫೀಸ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ವೇಗವಾಗಿ ಇಂಗ್ಲಿಷ್, ಹಿಂದಿ ಟೈಪಿಂಗ್ ಮಾಡುವ ಕೌಶಲ ಹೊಂದಿರಬೇಕು. ಗರಿಷ್ಠ ವಯೋಮಿತಿ 30.
ವಿದ್ಯಾರ್ಹತೆ:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಪಿಯುಸಿ ಅಥವಾ 10 + 2 ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ವೇಗವಾಗಿ ಇಂಗ್ಲಿಷ್, ಹಿಂದಿ ಟೈಪಿಂಗ್ ಮಾಡುವ ಕೌಶಲ ಹೊಂದಿರಬೇಕು.
ಗರಿಷ್ಠ ವಯೋಮಿತಿ: 27. ಎರಡೂ ಹುದ್ದೆಗಳಿಗೆ ಮೀಸಲು ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಒಎಂಆರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ ಮತ್ತು ಟೈಪಿಂಗ್ ಕೌಶಲ ಪರೀಕ್ಷೆ ಮೂಲಕ ಈ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಇದೇ ಜನವರಿ 31 ಕಡೆಯ ದಿನ. ಶುಲ್ಕ 1800. ಅರ್ಜಿ ಸಲ್ಲಿಸಲು, ವಿವರವಾದ ಅಧಿಸೂಚನೆ ನೋಡಲು ಹಾಗೂ ಹೆಚ್ಚಿನ ಮಾಹಿತಿಗೆ https://cbse.gov.in ಪರಿಶೀಲಿಸಬೇಕು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx