ಹಾಸನ: ಕಳೆದ 1 ತಿಂಗಳಿನಲ್ಲಿ ಹಾಸನದಲ್ಲಿ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ 22 ವರ್ಷದ ಮತ್ತೊಬ್ಬಳು ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ–ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದರು.
ನಿನ್ನೆ ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW