ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 657 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 42,536,137ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,97,802ಕ್ಕೆ ಇಳಿಕೆಯಾಗಿದೆ. ದೈನಂದಿನ ಕೋವಿಡ್ ಪಾಸಿಟಿವ್ ರೇಟ್ ಶೇ.389ರಷ್ಟಿದೆ.ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ಐಸಿಎಂಆರ್) ಮಹಾ ನಿರ್ದೇಶಕ ಡಾ.ಬಲರಾಮ್ ಅವರು ಲಸಿಕೆ ಸಂಬಂಧ ಮಾಹಿತಿ ನೀಡಿ ರಾಷ್ಟ್ರವ್ಯಾಪಿ ಕೋವಿಡ್-19 ಮೊದಲ ಡೋಸ್ ಅನ್ನು ಶೇ.96 ಪ್ರತಿಶತ ನೀಡಲಾಗಿದೆ. ಜತೆಗೆ ಭಾರತವು ಲಸಿಕೆ ಸೂಪರ್ ಪವರ್ ಆಗುವತ್ತ ಸಾಗಿದೆ ಎಂದು ಹೇಳಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB