nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    ರಾಷ್ಟ್ರೀಯ ಸುದ್ದಿ August 9, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    By Ganesh TumkuruAugust 9, 2026No Comments2 Mins Read
    sevata gyan tiwari

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ ವ್ಯಕ್ತಿಯೊಬ್ಬನಿಗೆ ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡಿ ಮೋಸಹೋಗಿರುವುದಾಗಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಜ್ಞಾನ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ.

    ಈ ಸಂಬಂಧ ಶಾಸಕರು ನೀಡಿದ ದೂರಿನನ್ವಯ ಪೊಲೀಸರು ಎಫ್‌ ಐಆರ್ ದಾಖಲಿಸಿಕೊಂಡು, ಆರೋಪಿ ಪ್ರಖರ್ ತ್ರಿವೇದಿ ಹಾಗೂ ಆತನ ತಂದೆ ಅನುಜ್ ತ್ರಿವೇದಿಯನ್ನು ಬಂಧಿಸಿದ್ದಾರೆ.

    ಸೀತಾಪುರ ಜಿಲ್ಲೆಯ ರೇವುಸಾ ಪೊಲೀಸ್ ಠಾಣೆಯಲ್ಲಿ ಶಾಸಕ ಜ್ಞಾನ್ ತಿವಾರಿ ದೂರು ದಾಖಲಿಸಿದ್ದಾರೆ. 2024ರಲ್ಲಿ ತಮ್ಮ ಮಗಳು ಪ್ರಗ್ಯಾ ಅವರನ್ನು ಮಿಶ್ರಿಖ್‌ನ ಚಂದ್ರವಾಲ್ ನಿವಾಸಿ ಅನುಜ್ ತ್ರಿವೇದಿ ಅವರ ಮಗ ಪ್ರಖರ್ ತ್ರಿವೇದಿಗೆ ಕೊಟ್ಟು ವಿವಾಹ ಮಾಡಿಕೊಡಲಾಗಿತ್ತು.

    ಮದುವೆಗೂ ಮುನ್ನ ಅನುಜ್ ತ್ರಿವೇದಿ ತಾನು ಮುಂಬೈ ಮೂಲದ ದೊಡ್ಡ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಿಕೊಂಡಿದ್ದನು. ಅಲ್ಲದೆ, ತನ್ನ ಹಾಗೂ ಮಗನ ಮೇಲಿದ್ದ ಅಪರಾಧ ಹಿನ್ನೆಲೆ ಮತ್ತು ಹಳೆಯ ಪ್ರಕರಣಗಳನ್ನು ಮರೆಮಾಚಿ ಮದುವೆ ಸಂಪ್ರದಾಯ ನೆರವೇರಿಸಿದ್ದನು.

    ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಸಾಮಾಜಿಕ ಜಾಲತಾಣಗಳು ಹಾಗೂ ಇತರ ಮೂಲಗಳ ಮೂಲಕ ಪ್ರಖರ್ ತ್ರಿವೇದಿಯ ಅಸಲಿ ಬಣ್ಣ ಬಯಲಾಗಿದೆ. ಆರೋಪಿ ಪ್ರಖರ್ ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

    ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಜ್ಞಾನ್ ತಿವಾರಿ ಅವರು ಆರೋಪಿ ಕುಟುಂಬದೊಂದಿಗೆ ಎಲ್ಲ ಸಂಬಂಧಗಳನ್ನು ಕಡಿದುಕೊಂಡು ತಮ್ಮ ಮಗಳನ್ನು ಮನೆಗೆ ಕರೆತಂದಿದ್ದಾರೆ. “ಈ ಘಟನೆಯಿಂದ ನಮ್ಮ ಕುಟುಂಬ ತೀವ್ರ ಮಾನಸಿಕ ಆಘಾತಕ್ಕೊಳಗಾಗಿದೆ ಹಾಗೂ ಜನಪ್ರತಿನಿಧಿಯಾಗಿ ನನ್ನ ಸಾಮಾಜಿಕ ಗೌರವಕ್ಕೆ ಧಕ್ಕೆಯಾಗಿದೆ” ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

    ಆಗಸ್ಟ್ 6ರಂದು ತಮ್ಮ ಮಗಳೊಂದಿಗೆ ವಿಡಿಯೋ ಹಂಚಿಕೊಂಡಿದ್ದ ಶಾಸಕರು, ತಮಗೆ ಹಾಗೂ ತಮ್ಮ ಮಗಳಿಗೆ ಮೋಸ ಮಾಡಿದ ಆರೋಪಿಗಳಿಗೆ ಗಲ್ಲಿಗೇರಿಸುವಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.