ಬೆಂಗಳೂರು: ಬರೋಬ್ಬರಿ 270 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ದ್ವಿಚಕ್ರ ವಾಹನದ ಒಡತಿಗೆ, ಬೆಂಗಳೂರು ಸಂಚಾರ ಠಾಣೆ ಪೊಲೀಸರು 1.36 ಲಕ್ಷ ರೂಪಾಯಿ ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಕೆಎ-03 ಜೆ.ಇ-5705 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದ ಮಾಲೀಕರಾದ ಮಹಿಳೆಗೆ, ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ದೃಶ್ಯಗಳನ್ನು ಸೆರೆ ಹಿಡಿದಿರುವ ಫೋಟೋ ಸಮೇತ ನೋಟಿಸ್ ಕಳುಹಿಸಿದ್ದಾರೆ.
ನಗರದ ಸುಬ್ಬಯ್ಯನಪಾಳ್ಯ, ಕಾಕ್ಸ್ ಟೌನ್ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡಿದ್ದ ಈ ಮಹಿಳೆ, ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದರು. ಅಲ್ಲದೇ ಸವಾರ ಹಾಗೂ ಹಿಂಬದಿ ಸವಾರ ಹೆಲ್ಮೆಟ್ ಕೂಡ ಹಾಕಿರಲಿಲ್ಲ. 50 ಸಾವಿರ ರೂಪಾಯಿಗಿಂತ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿರುವ ವ್ಯಕ್ತಿಗಳ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಈ ದ್ವಿಚಕ್ರ ವಾಹನದ ಮಾಲೀಕರು ಇದ್ದಾರೆ. ಹೀಗಾಗಿ, ಆಕೆಗೆ 1.36 ಲಕ್ಷ ರೂ. ದಂಡ ವಿಧಿಸಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296