ತಿಪಟೂರು: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ನೌಕರರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಅಕ್ಟೋಬರ್ 27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್ .ಎಮ್.ಸ್ವಾಮಿ ತಿಳಿಸಿದರು.
ಸಂಘದ ಅಧ್ಯಕ್ಷರು ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಅಕ್ಟೋಬರ್ 27 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಪಿ.ಜಿ.ಎಮ್ .ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿರುಷಭ ದೇಶಿ ಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕ ಕೆ. ಷಡಕ್ಷರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಮಾರಂಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸನ್ಮಾನಿಸಲಾಗುತ್ತದೆ. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ನೌಕರರಿಗೆ ಸನ್ಮಾನಿಸಲಾಗುವುದು ಎಂದರು.
ಈ ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಆರ್.ಸುರೇಶ್ ನಿರ್ದೇಶಕ ಚಂದ್ರಶೇಖರ್ ಹಾಗೂ ಖಜಾಂಚಿ ಚಿದಾನಂದ್ ತೋಂಟರಾಧೃ ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296